ಸೇಡಂ: ಭ್ರಷ್ಟ ಅಧಿಕಾರಿಗಳ ಬೇಟೆಗೆ ಲೋಕಾಯುಕ್ತ ಅಧಿಕಾರಿಗಳು ತಯ್ಯಾರಿ ಅಹವಾಲು ಸ್ವೀಕಾರಕ್ಕೆ ಮುಂದಾಗಿದ್ದು, ಸೇಡಂನ ತಹಸೀಲ್ದರ ಕಚೇರಿಯಲ್ಲಿ ಏಪ್ರೀಲ್ 6 ರಂದು ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಸೇಡಂನ ತಹಸೀಲ್ದಾರ ಕಚೇರಿ ಆವರಣದಲ್ಲಿ ಸಾರ್ವಜನಿಕರು ತಮ್ಮ ದೂರುಗಳನ್ನು ನೀಡಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಕೆಲಸ ವಿಳಂಬ ಮಾಡುತ್ತಿದ್ದರೆ, ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸಿದರೆ ಅಥವಾ ಕಚೇರಿಗೆ ಅಲೆದಾಡಿಸುತ್ತಿದ್ದರೆ, ಕೆಲಸ ಮಾಡಿಕೊಡಲು ಲಂಚ ಕೇಳಿದ್ದರೆ ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ. ಕಲಬುರಗಿ ಲೋಕಾಯುಕ್ತ ಡಿಎಸ್ಪಿ ಮಂಜುನಾಥ ಗಂಗಲ್ ಅವರು ಅಹವಾಲು ಸ್ವೀಕರಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
0 Comments